ಪ್ರಗತಿವಾಹಿನಿ ಸುದ್ದಿ, ಮೂಡಲಗಿ:
ರಾಜ್ಯದಲ್ಲಿರುವ ಸೇವಾ ನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮಾರಕವಾಗುವ ವೃಂದ ಬಲ ಹಾಗೂ ನೇಮಕಾತಿ ನಿಯಮದ ವಿರುದ್ಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಿರ್ಧರಿಸಿದೆ. ಜುಲೈ 9 ರಂದು ಚಿಕ್ಕೋಡಿಯ ಡೈಟ್ ಆವರಣದಲ್ಲಿ ಒಂದು ದಿನದ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಮೂಡಲಗಿ ತಾಲೂಕಾ ಘಟಕ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೋಳಿಸಬೇಕು. ಎನ್.ಪಿ.ಎಸ್ ರದ್ದುಗೊಳಿಸಬೇಕು, ಎಲ್.ಕೆ.ಜಿ, ಯು.ಕೆ.ಜಿ ಪ್ರಾರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿ ನ್ಯೂನ್ಯತೆ ಸರಿ ಪಡಿಸಬೇಕು. 6 ನೇ ವೇತನ ಆಯೋಗದ ಅಂತಿಮ ವರದಿಯ ಶಿಪಾರಸ್ಸನ್ನು ಅನುಷ್ಠಾನ ಗೊಳಿಸಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಹಾಗೂ ಇನ್ನಿತರ ಎಲ್ಲಾ ಸೇವಾ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಮುಷ್ಕರದಲ್ಲಿ ಪಾಲ್ಗೊಳ್ಳುವ ಶಿಕ್ಷಕರು ಖಡ್ಡಾಯವಾಗಿ ಜುಲೈ 9 ಮಂಗಳವಾರ ಸಾಂದರ್ಭಿಕ ರಜೆಯನ್ನು ಹಾಕಿ ಬರಬೇಕೆಂದು ಮೂಡಲಗಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಮ್ ಲೋಕನ್ನವರ, ತಾಲೂಕಾಧ್ಯಕ್ಷ ಬಿ.ಆರ್ ಥರಕಾರ, ಕಾರ್ಯದರ್ಶಿ ಎಲ್.ಎಮ್ ಬಡಕಲ, ಸಹ ಕಾರ್ಯದರ್ಶಿ ಎ.ಪಿ ಪರಸಣ್ಣವರ, ಸಂಘಟನಾ ಕಾರ್ಯದರ್ಶಿ ವಾಯ್.ಡಿ ಜಲ್ಲಿ, ಸರಕಾರಿ ನೌಕರ ಸಂಘದ ರಾಜ್ಯ ಪರಿಷತ್ತಿನ ಸದಸ್ಯ ಆರ್.ಎಮ್ ಮಹಾಲಿಂಗಪೂರ, ಸದಸ್ಯರಾದ ಎಮ್ ವಾಯ್ ಸಣ್ಣಕ್ಕಿ, ಕೆ.ಆರ್ ಅಜ್ಜಪ್ಪನವರ, ಎಲ್.ಎಮ್ ಬೂಮನ್ನವರ, ಕೆ.ಎಲ್.ಮೀಶಿ, ಪಿ.ಬಿ ಕುಲಕರ್ಣಿ, ಬಿ.ಎ ಡಾಂಗೆ, ಎಸ್ ಎಮ್ ಮಂಗಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ