*ವಿಧಾನಸಭಾ ಚುನಾವಣೆ: ಅಕ್ರಮವಾಗಿ ಸಾಗಿಸುತ್ತಿದ್ದ 15 ಲಕ್ಷ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲ ದಿನಗಳು ಬಾಕಿಯಿರುವಾಗಲೇ ಕುರುಡು ಕಾಂಚಾಣ ಪತ್ತೆಯಾಗುತ್ತಿದ್ದು, ಅಕ್ರವಾಗಿ ಸಾಗಿಸುತ್ತಿದ್ದ 15 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿ-ಕಾರವಾರ ಚೆಕ್ ಪೋಸ್ಟ್ ನಲ್ಲಿ ಕಾರು ತಪಾಸಣೆ ನಡೆಸಿದಾಗ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 15 ಲಕ್ಷ ರೂಪಾಯಿ ಪತ್ತೆಯಾಗಿದೆ.

ಅಂಕೋಲಾದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕಾರನ್ನು ಚೆಕ್ ಪೋಸ್ಟ್ ನಲ್ಲಿ ತಡೆದು ತಪಾಸಣೆ ನಡೆಸಿದಾಗ ಈ ಹಣ ಪತ್ತೆಯಾಗಿದೆ. ಕಾರು ಚಾಲಕನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button