*ಶಾಲಾ ಬಸ್ ನಲ್ಲಿ ಅಗ್ನಿಅವಘಡ*

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಶಾಲೆಯಿಂದ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ನಡೆದಿದೆ.

ಸಿರುಗುಪ್ಪದ ವಿಶ್ವಜ್ಯೋತಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ ನಲ್ಲಿ ಈ ಅವಘಡ ಸಂಭವಿಸಿದ್ದು, ಬಸ್ ಸಿರಗುಪ್ಪ-ತೆಕ್ಕಲಕೋಟೆ ಮಾರ್ಗವಾಗಿ ಬರುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ವೇಳೆ ಬಸ್ ನಲ್ಲಿ 30 ಮಕ್ಕಳು ಇದ್ದರು. ತಕ್ಷಣ ಚಾಲಕ ಬಸ್ ನಿಲ್ಲಿಸಿ, ಮಕ್ಕಳನ್ನು ಕೆಳಗಿಳಿಸಿದ್ದಾರೆ. ಪರೀಕ್ಷೆ ಮುಗಿದ ಬಳಿಕ ವಿಶ್ವಜ್ಯೋತಿ ಶಾಲೆಯಿಂದ ಮಕ್ಕಳನ್ನು ಮನೆಗೆ ಬಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ಘಟನೆ ಸಂಭವಿಸಿದೆ.

ಸಧ್ಯ ಮಕ್ಕಳು ಸುರಕ್ಷಿತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Related Articles

Back to top button