Latest

*ಪ್ರತಿಭಟನೆ ವೇಳೆ ಗಲಾಟೆ; ಪೊಲೀಸರಿಂದ ಲಘು ಲಾಠಿ ಪ್ರಹಾರ*

ಪ್ರಗತಿವಾಹಿನಿ ಸುದ್ದಿ; ಹಾಸನ: ಬಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಪ್ರತಿಭಟನೆ ವೇಳೆ ಎರಡು ಸಮುದಾಯಗಳ ನಡುವೆ ಗಲಾಟೆ ತಾರಕ್ಕಕೇರಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.

ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ರದ್ದುಗೊಳಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ವಿಶ್ವ ವಿದೂ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದರು. ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಮುಸ್ಲಿಂ ಸಮುದಾಯದ ಯುವಕ ಕುರಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ.

Home add -Advt

ರೊಚ್ಚಿಗೆದ್ದ ಬಜರಂಗದಳ ಕಾರ್ಯಕರ್ತರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಯುವಕನ ನಡುವೆ ವಾಗ್ವಾದ ನಡೆದಿದೆ. ಬಜರಂಗದಳ ಕಾರ್ಯಕರ್ತರು ಯುವಕನನ್ನು ಅಟ್ಟಾಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲಿಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Related Articles

Back to top button