ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದು ಬಿಜೆಪಿಯ ಆತಂತರಿಕವಾದ ಒಂದು ಕುತಂತ್ರ ಎಂದು ಹೇಳಿದ್ದಾರೆ.
ಒಳ ಮೀಸಲಾತಿ ವಿಂಗಡಣೆ ವಿರೋಧಿಸಿ ಬಂಜಾರಾ ಸಮುದಾಯ ಕರೆಕೊಟ್ಟಿದ್ದ ಶಿಕಾರಿಪುರ ತಾಲೂಕು ಪ್ರತಿಭಟನೆಯಲ್ಲಿ ನಿನ್ನೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತುರಾಟ ನಡೆಸಿ ಉದ್ರಿಕ್ತರ ಗುಂಪು ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಬೇಕು ಎಂದು ಷಡ್ಯಂತ್ರ ನಡೆಸಿ, ಬೇಕು ಅಂತಾನೇ ಅವರ ಮನೆ ಮೇಲೆ ಕಲ್ಲು ಹೊಡೆಸಿದ್ದಾರೆ ಎಂದಿದ್ದಾರೆ.
ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಗೊಂದಲ ಸೃಷ್ಟಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸುತ್ತಾರೆ ಎಂದರೆ ಕಾರಣ ಏನು? ಇದು ಬಿಜೆಪಿಯ ಆಂತರಿಕ ಕುತಂತ್ರ. ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮೂಲೆ ಗುಂಪು ಮಾಡಬೇಕು ಎಂಬ ಹುನ್ನಾರ. ಬಿಜೆಪಿಯಲ್ಲಿ ಯಾರಿಗೂ ಸಮಾಧಾನವಿಲ್ಲ. ಒಬ್ಬೊಬ್ಬರಲ್ಲಿ ಅಸಮಾಧಾನ ಭುಗಿಲೆದ್ದಿದೆ ವಾಗ್ದಾಳಿ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ