Latest

*ಚುನಾವಣೆ ಹೊತ್ತಲ್ಲೇ ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ತಿಳಿಸಿದ್ದಾರೆ.

ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವರುಣಾದಲ್ಲಿ ನನ್ನನ್ನು ಸೋಲಿಸುವ ನಿಟ್ಟಿನಲ್ಲಿ ಹಾಗು ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿರುವುದು ನಿಜ ಎಂದು ಹೇಳಿದ್ದಾರೆ.

Home add -Advt

2018ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಈ ಎರಡೂ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿದ್ದವು. ಅದೇ ರೀತಿ ಈಗಲೂ ಮೈತ್ರಿ ಮಾಡಿಕೊಂಡರೆ ಅಚ್ಚರಿಯಿಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಕಟ್ಟಿಹಾಕುವ ನಿಟ್ಟಿನಲ್ಲಿ ಬೆಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆಯೇ ಎಂಬ ಹೊಸ ಚರ್ಚೆ ರಾಜ್ಯ ರಾಜಕೀಯ ವಲಯದಲ್ಲಿ ಶುರುವಾಗಿದೆ.

Related Articles

Back to top button