ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್ ಆಗಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದಾಗುವ ಸಾಧ್ಯತೆ ಇದೆ.
ಬೆಳಿಗ್ಗೆ 11:30ಕ್ಕೆ ಕೇಂದ್ರ ಚುನಾವಣಾ ಆಯೋಗ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಮಾಡಲಿದೆ. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗುವುದರಿಂದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಲಿವೆ. ಸಿಎಂ ಬೊಮ್ಮಾಯಿ ಇಂದು ಕೊಪ್ಪಳ, ಹಾವೇರಿ ಹಾಗೂ ಸ್ವಕ್ಷೇತ್ರ ಶಿಗ್ಗಾವಿ ಪ್ರವಾಸ ಕೈಗೊಂಡಿದ್ದರು. ಕೊಪ್ಪಳದಲ್ಲಿ ನೀರಾವರಿ ಯೋಜನೆಗಳಿಗೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದರು. ಆದರೆ ನೀತಿ ಸಂಹಿತೆ ಜಾರಿಯಾಗುವುದರಿಂದ ಕಾರ್ಯಕ್ರಮ ರದ್ದಾಗಿದೆ ಎನ್ನಲಾಗಿದೆ.
ನೀತಿ ಸಂಹಿತೆ ಜಾರಿಯಾದರೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತಿಲ್ಲ.ಇನ್ನು ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಸಿಎಂ ಜಿಲ್ಲಾ ಪ್ರವಾಸವೂ ರದ್ದಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ