ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವರು, ವಿಪಕ್ಷ ನಾಯಕರಿಗೆ ನೀತಿ ಸಂಹಿತೆ ಬಿಸಿ ತಟ್ಟಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಿ ಕಾರಿನಲ್ಲಿ ವರುಣಾ ಕ್ಷೇತ್ರದ ಪ್ರವಾಸದಲ್ಲಿದ್ದರು. ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಸರ್ಕಾರಿ ವಾಹನ ಬಿಟ್ಟು ಖಾಸಗಿ ವಾಹನದಲ್ಲಿ ಸಿದ್ದರಾಮಯ್ಯ ತೆರಳಿದ್ದಾರೆ.
ಈ ನಡುವೆ ಸಚಿವರಾದ ಹಾಲಪ್ಪ ಆಚಾರ್, ಸಿ.ಸಿ.ಪಾಟೀಲ್ ಕೂಡ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ್ದು, ಖಾಸಗಿ ಕಾರಿನಲ್ಲಿ ಪ್ರಯಾಣ ಬೆಳಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ