Latest

*ಶಸ್ತ್ರಾಸ್ತ್ರಗಳಿಗೆ ನಿರ್ಬಂಧ; ಠಾಣೆಗಳಿಗೆ ಒಪ್ಪಿಸಲು ಕಮಿಷ್ನರ್ ಆದೇಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆ ಚುನಾವಣೆ ಘೋಷಣೆಯಾಗಿರುವುದರಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಬೆಂಗಳೂರಿನಲ್ಲಿ ಲೈಸನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ.

ನೀತಿ ಸಂಹಿತೆ ಮುಕ್ತಾಯವಾಗುವವರೆಗೆ ಶಸ್ತ್ರಾಸ್ತ್ರಗಳನ್ನು ಆಯಾ ವ್ಯಾಪ್ತಿಯ ಠಾಣೆಗಳಿಗೆ ಒಪ್ಪಿಸುವಂತೆ ಸೂಚನೆ ನಿದಲಾಗಿದೆ. ಸಾರ್ವಜನಿಕರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಏಪ್ರಿಲ್ 10ರೊಳಗಾಗಿ ಠಾಣೆಗಳಿಗೆ ಒಪ್ಪಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ನೀಡಿದ್ದಾರೆ.

ಮೇ 16ರ ಬಳಿಕ ಸಾರ್ವಜನಿಕರು ಶಸ್ತ್ರಾಸ್ತ್ರಗಳನ್ನು ಮರಳಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button