Latest

BJPಗೆ ಬಿಗ್ ಶಾಕ್; ಪಕ್ಷಕ್ಕೆ ಗುಡ್ ಬೈ ಹೇಳಿದ ಶಾಸಕ ಗೋಪಾಲಕೃಷ್ಣ

ಪ್ರಗತಿವಾಹಿನಿ ಸುದ್ದಿ; ಶಿರಸಿ: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಜೋರಾಗಿದ್ದು, ಆಡಳಿತಾರೂಢ ಬಿಜೆಪಿಗೆ ಶಾಸಕರೇ ಶಾಕ್ ನೀಡಿದ್ದಾರೆ. ಬಿಜೆಪಿ ಹಿರಿಯ ಶಾಸಕ ಎನ್.ವೈ.ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ.

Home add -Advt

ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಚೇರಿಗೆ ಆಗಮಿಸಿದ ಶಾಸಕರು, ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.

ಗೋಪಾಲಕೃಷ್ಣ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

https://pragati.taskdun.com/muniratnacomplaintcongresskusuma/

Related Articles

Back to top button