Latest

ಬರೋಬ್ಬರಿ 1 ಕೋಟಿ ರೂಪಾಯಿ ನಗದು ಜಪ್ತಿ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ಅಕ್ರಮ ತಡೆಯಲು ಪೊಲೀಸರು ಎಷ್ಟೇ ಸಜ್ಜಾಗಿದ್ದರೂ ಪೊಲೀಸರ ಕಣ್ತಪ್ಪಿಸು ಹೋಗಿ ಹಲವರು ಸಿಕ್ಕಿ ಬೀಳುತ್ತಿದ್ದಾರೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ರೂಪಾಯಿ ನಗದನ್ನು ಕಲಬುರ್ಗಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಕಲಬುರ್ಗಿಯ ಫರಹತಾಬಾದ್ ಚೆಕ್ ಪೋಸ್ಟ್ ನಲ್ಲಿ ಕಾರನ್ನು ತಡೆದ ಪೊಲೀಸರು ಪರಿಶೀಲನೆ ನಡೆಸಿದಾಗ 1 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ರವಿ ಎಂಬುವವರು ಈ ಹಣವನ್ನು ಸಾಗಿಸುತ್ತಿದ್ದರು. ರವಿ ಎಂಬುವವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

https://pragati.taskdun.com/bjp-mla-n-y-gopalakrishnaresigncongress-join/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button