ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕೊಡಗು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಧ್ಯಾಹ್ನ ಮೋಡ ಕವಿದ ವಾತಾವರಣವಿರಲಿದೆ. ರಾತ್ರಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.
ಕರಾವಳಿ ಪ್ರದೇಶ ಹಾಗೂ ಒಳನಾಡಿನಲ್ಲಿ ಶುಷ್ಕ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ