Latest

*ಜೈಲುಪಾಲಾದ BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶಾಸಕರು ಜೈಲುಪಾಲಾಗಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಕಸ್ಟಡಿಗೆ ವಹಿಸಿ ಈ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿತ್ತು. ಇಂದು ಮಾಡಾಳ್ ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಮಾಡಾಳ್ ಅವರಿಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ.

https://pragati.taskdun.com/it-will-rain-for-three-days-from-today-in-different-parts-of-the-state/
https://pragati.taskdun.com/vidhanasabha-electionbike-rallykittur/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button