Latest

*ನಾವು ಬಾಯಿಗೆ ಬಟ್ಟೆ ಕಟ್ಟಿಕೊಂಡು ಕೂಳಿತುಕೊಳ್ಳಬೇಕಾದ ಸ್ಥಿತಿ; ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಯುಪಿ ಮಾಡೆಲ್ ಆಫ್ ಡೆವಲೆಪ್ಮೆಂಟ್ ಬರ್ತಿದೆ. ಇದನ್ನು ಪ್ರಶ್ನೆ ಮಾಡಿದರೆ ರಾಜಕೀಯವಾಗಿ ಮುಗಿಸುವ ಬೆದರಿಕೆ ಸಂದೇಶ ರವಾನೆಯಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಯುಪಿ ಮಾದರಿ ತರ್ತಿದ್ದಾರೆ. ಸರ್ಕಾರದ ನಡೆಯನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ. ಏನೂ ಮಾತನಾಡುವಂತಿಲ್ಲ. ಪ್ರಶ್ನೆ ಮಾಡಿದರೆ ರಾಜಕೀಯವಾಗಿ ಮುಗಿಸುತ್ತೇವೆ ಎಂದು ಸಚಿವ ಅಶ್ವತ್ಥನಾರಾಯಣ ಮೂಲಕ ಸಂದೇಶ ರವಾನಿಸಿದ್ದಾರೆ. 60-70 ಜನರ ಮೇಲೆ ಎಫ್ ಐ ಆರ್ ಹಾಕಲಾಗಿದೆ ಎಂದು ಆರೋಪಿಸಿದರು.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ರಸ್ತೆ ಅಗಲೀಕರಣ, ಫ್ಲೈ ಓವರ್ ಬೇಡ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಸಿದವರ ವಿರುದ್ಧ ಕೇಸ್ ಹಾಕಿ ದೌರ್ಜನ್ಯ ನಡೆಸಲಾಗುತ್ತಿದೆ. ಸಚಿವ ಅಶ್ವತ್ಥನಾರಾಯಣ ದಬ್ಬಾಳಿಕೆ, ದೌರ್ಜನ್ಯ ನಡೆಸುತ್ತಿದ್ದಾರೆ. 30 ಸಾವಿರ ನಾಗರಿಕರು ಸ್ಯಾಂಕಿ ಟ್ಯಾಂಕ್ ಬಳಿ ಫ್ಲೈ ಓವರ್ ಬೇಡ ಅಂತ ಪಿಟಿಷನ್ ಸಹಿ ಮಾಡಿದ್ದಾರೆ. ಸ್ಯಾಂಕಿಟ್ಯಾಂಕ್ ಬಳಿ ರಸ್ತೆ ಅಗಲೀಕರಣ ಮಾಡಬೇಡಿ ಅಂತ ಶಾಲಾ ಮಾಕ್ಕಳು ಬೊಮ್ಮಾಯಿ ಅಂಕಲ್ ಅಂತ ಪತ್ರ ಬರೆದಿದ್ದಾರೆ. ಮಕ್ಕಳ ಪತ್ರಕ್ಕೂ ಮುಖ್ಯಮಂತ್ರಿಗಳು ಕಿವಿಗೊಡುತ್ತಿಲ್ಲ. ಸಾರ್ವಜನಿಕರೊಂದಿಗೆ ಮಾತುಕತೆ ನಡೆಸುವ ಸೌಜನ್ಯವೂ ಸರ್ಕಾರಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://pragati.taskdun.com/karnataka-rainupdateimd/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button