Latest

*ಭೀಕರ ಅಪಘಾತ; KSRTC ಬಸ್-ಲಾರಿ ನಡುವೆ ಸಿಲುಕಿದ ಬೈಕ್ ನಲ್ಲಿದ್ದ ಮಹಿಳೆ; ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಸಿಲುಕಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಜಂಕ್ಷನ್ ಬಳಿ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಬಸ್ ಹಾಗೂ ಲಾರಿ ನಡುವೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Home add -Advt

ಅಪಘಾತದಲ್ಲಿ ಬೈಕ್ ನಲ್ಲಿದ್ದ 7 ವರ್ಷದ ಮಗ ಹಾಗೂ ಮಹಿಳೆಯ ತಾಯಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮಹಿಳೆಯ ತಲೆಯಮೇಲೆ ಲಾರಿಯ ಚಕ್ರ ಹರಿದಿದೆ. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7 ವರ್ಷದ ಮಗನ ತಲೆ ಹಾಗೂ ಕಾಲಿಗೆ ಪೆಟ್ಟಾಗಿದ್ದು, ಮಹಿಳೆಯ ತಾಯಿಯ ಎರಡೂ ಕಾಲಿಗೆ ಗಂಭೀರಗಾಯಗಳಾಗಿವೆ.

ಅಪಘಾತದ ಬೆನ್ನಲ್ಲೇ ಸ್ಥಳೀಯರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದು, ಬಸ್ ಹಾಗು ಲಾರಿ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ ಘಟನೆಯೂ ನಡೆದಿದೆ.

https://pragati.taskdun.com/vidhanasabha-electionb-l-santoshspeechgangavatipolice-entry/


Related Articles

Back to top button