ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಮಂಡ್ಯದಲ್ಲಿ ರೋಡ್ ಶೋ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ರೋಡ್ ಶೋ ವೇಳೆ ಡಿ.ಕೆ.ಶಿವಕುಮಾರ್ ಕಲಾವಿದರತ್ತ ಹಣ ಎರಚಿದ್ದರು. ಈ ಬಗ್ಗೆ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ದಾಖಲಿಸಿದ್ದರು. ಎನ್ ಸಿ ಆರ್ ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಈಗ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
https://pragati.taskdun.com/karnatakarain-updatebangalore-2/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ