Kannada NewsKarnataka News

ಬೆಳಗಾವಿ ಬಳಿ ಭಾರಿ ಪ್ರಮಾಣದ ಹಣ ವಶ

ದಾಖಲೆರಹಿತ ಎರಡು ಕೋಟಿ ನಗದು ವಶ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.

ಮುಂಬೈಯಿಂದ ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್(KA 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ‌ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿದೆ.

ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ‌ ಮಾಹಿತಿಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣವೇ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭೇಟಿ ನೀಡಿ ಪ್ರಕರಣವನ್ನು ಪರಿಶೀಲಿಸಿದರು.

ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಡಿಸಿಪಿ ಸ್ನೇಹಾ, ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿ ರಾಜಶೇಖರ್ ಡಂಬಳ, ಸಿಪಿಐ ಅಮರೇಶ್, ಎಫ್.ಎಸ್.ಟಿ. ತಂಡದ ಶಂಭುಲಿಂಗಪ್ಪ, ರಾಜೇಂದ್ರ ಮೊರಬದ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡದ ಕಾರ್ಯವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಶ್ಲಾಘಿಸಿದ್ದಾರೆ.

https://pragati.taskdun.com/40-lakhs-valuable-gold-silver-jewelery-seized-near-khanapur/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button