ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಟ ಕಿಚ್ಚ ಸುದೀಪ್ ಸಿಎಂ ಬಸವರಾಜ್ ಬೊಮ್ಮಾಯಿಗೆ ಬೆಂಬಲ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಲಾವಿದರು ತಮಗೆ ಬೇಕಾದವರನ್ನು ಚುನಾವಣೆಯಲ್ಲಿ ಬೆಂಬಲಿಸುತ್ತಾರೆ. ಇದರಿಂದ ನಮಗೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸರ್ಕಾರ ಸಿನಿಮಾ ನಟರ ಮೇಲೆ ಒತ್ತಡ ಹಾಕಿರಬಹುದು ಅಥವಾ ನಟರ ಬಳಿ ಮನವಿ ಮಾಡಿಕೊಂಡಿರಬಹುದು. ಹಾಗಾಗಿ ಸುದೀಪ್ ಸಿಎಂ ಬೊಮ್ಮಾಯಿ ಅವರನ್ನು ಬೆಂಬಲಿಸಿರಬಹುದು ಎಂದರು.
ಈ ಹಿಂದೆ ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿದ್ದ ವಿಚಾರವಾಗಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜಕಾರಣದ ಉದ್ದೇಶದಿಂದ ನಾನು ಸುದೀಪ್ ಅವರನ್ನು ಭೇಟಿಯಾಗಿಲ್ಲ. ನಾನು ಮತ್ತು ನಟ ಸುದೀಪ್ ಹಳೇ ಸ್ನೇಹಿತರು. ನನ್ನ ಮತ್ತು ಸುದೀಪ್ ನಡುವೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ