ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಏಪ್ರಿಲ್ 10ರವರೆಗೂ ಮಳೆ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.
ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಲಿಂಗದಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿದೆ. ಈ ವೇಳೆ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಇಬ್ಬರು ಯುವಕರು ಸಿಡಿಲುಬಡಿದು ಶಳದಲ್ಲೇ ಸಾವನ್ನಪ್ಪಿದ್ದಾರೆ.
ಶರಣಪ್ಪ ಪುರದ (20) ಹಾಗೂ ದೇವರಾಜ್ ಬಾಡಗಿ (16) ಮೃತರು. ಘಟನೆಯಲ್ಲಿ ನಾಲ್ಕು ಕುರಿ, ಒಂದು ಆಡು ಸಾವನ್ನಪ್ಪಿವೆ.
ಬಾಗಲಕೋಟೆ ಜಿಲ್ಲೆಯಲ್ಲಿಯೂ ಬಿರುಗಾಳಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಬಾದಾಮಿ ಆಲೂಕಿನ ಜಾಲಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು, ಮನೆ ಮೇಲ್ಛಾವಣಿ ಕುಸಿದು ಬಿದ್ದಿದೆ. ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಯಂಕುಬಾಯಿ ಕುಲ್ಕರ್ಣಿ(29), ಶಾರದಾ ಪತ್ತಾರ (61) ಮೃತರು. ಕೊಪ್ಪಳ, ರಾಯಚೂರು, ಧಾರವಾಡ ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.
ಇನ್ನೂ ಕೆಲದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ