*KMF ಮುಳುಗಿಸಿ ಅಮುಲ್ ಸ್ಥಾಪಿಸಲು ಸಂಚು; ಕನ್ನಡ ಕಾಮಧೇನುವಿನ ಕೆಚ್ಚಲು ಕೊಯ್ಯತ್ತಿದೆ ಬಿಜೆಪಿ; ಕಿಡಿ ಕಾರಿದ ಕಾಂಗ್ರೆಸ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕದ ಕೆ ಎಂ ಎಫ್ ನಂದಿನಿ ಮುಳುಗಿಸಿ ಅಮುಲ್ ಸ್ಥಾಪಿಸಲು ಬಿಜೆಪಿ ಸಂಚು ರೂಪಿಸುತ್ತಿದೆ. ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ದ್ರೋಹ ಬಗೆಯುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಬಿಜೆಪಿ ನಂದಿನಿ ಎಂಬ ಕನ್ನಡ ಕಾಮಧೇನುವಿನ ಕೆಚ್ಚಲು ಕೊಯ್ಯಲು ಹೊರಟಿದೆ ಅಮುಲ್ + ನಂದಿನಿ ವಿಲೀನ ಎಂದ ಅಮಿತ್ ಶಾ ಮೊಸರಿಗೆ ದಹಿ ಹೆಸರು ಕಡ್ಡಾಯಗೊಳಿಸಿದರು. KMF ಹಾಲು ಪೂರೈಕೆಯಲ್ಲಿ ಉದ್ದೇಶಪೂರ್ವಕ ವ್ಯತ್ಯಯ ಸೃಷ್ಟಿಸಿದರು. ಈಗ ಅಮೂಲ್ ಮೂಲಕ ನಂದಿನಿಯನ್ನು ನಂಬಿದ ರಾಜ್ಯದ ರೈತರನ್ನು ಸರ್ವನಾಶ ಮಾಡುತ್ತಿದೆ ಬಿಜೆಪಿ ಸರ್ಕಾರ ಎಂದು ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಅಮುಲ್ + ನಂದಿನಿ ವಿಲೀನ ಎಂದರು. ಮೊಸರಿಗೆ ಹಿಂದಿಯ ‘ದಹಿ’ ಇರಲೇಬೇಕು ಎಂದರು. KMFಗೆ ಹಾಲು ನೀಡುವ ರೈತರಿಗೆ 5,6 ತಿಂಗಳಿಂದ ಸಹಾಯಧನ ನಿಲ್ಲಿಸಿದರು. ಉದ್ದೇಶಪೂರ್ವಕವಾಗಿ ‘ನಂದಿನಿ’ ಉತ್ಪನ್ನಗಳ ಕೊರತೆ ಸೃಷ್ಟಿಸಿದರು. ಈಗ ಅಮೂಲ್ನ್ನು ಕರ್ನಾಟಕಕ್ಕೆ ತಂದುಬಿಟ್ಟರು. ನಂದಿನಿಯ ಕೆಚ್ಚಲು ಕೊಯ್ಯುತ್ತಿದೆ ಬಿಜೆಪಿ ಎಂದು ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.
https://twitter.com/INCKarnataka/status/1644602378761674755?s=20
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ