Latest

*ಬೆಳಗಾವಿ ಸೇರಿ ಹಲವೆಡೆ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷೀನ ಒಳನಾಡಿನ ಹಲವೆಡೆಗಳಲ್ಲಿ 2-3 ದಿನಗಳ ಕಾಲ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.

Home add -Advt

ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರ್ಗಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.

ಈಗಾಗಲೇ ಯಾವುದೇ ಮುನ್ಶುಚನೆಯಿಲ್ಲದೇ ಗೋಕಾಕ್, ಬೈಲಹೊಂಗಲ, ಔರಾದ್, ನರಗುಂದ, ಮುಂಡಗೋಡ, ಶೃಂಗೇರಿಯ ಕೆಲ ಭಾಗಗಳಲ್ಲಿ ಮಳೆಯಾಗಿದೆ.

https://pragati.taskdun.com/thyroid-nodulesurgerysuccessful-kle-hospital-doctors/

Related Articles

Back to top button