*ಕನ್ನಡಿಗರ ಬ್ಯಾಂಕ್, ಏರ್ ಪೋರ್ಟ್ ಮುಕ್ಕಿದ್ದಾಯ್ತು, ಈಗ KMF ನುಂಗಲು ಹೊರಟಿದ್ದೀರಾ?; ನೀವು ಕರ್ನಾಟಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಖಡಕ್ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯ ಪ್ರವಸದ ಬಗ್ಗೆ ವಿಪಕ್ಷ ನಾಯಕರು ಹಿಗ್ಗಾ ಮುಗ್ಗಾ ಟೀಕಿಸಿದ್ದಾರೆ. ಪ್ರಧಾನಿ ಮೋದಿಯವರೇ ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯ್ತು. ಈಗ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ? ನಮ್ಮ ವಿಜಯಾ ಬ್ಯಾಂಕ್ ನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್ ನದ್ದು. ಬಂದರು, ಏರ್ ಪೋರ್ಟ್ ನುಂಗಿದ ಅದಾನಿ ಗುಜರಾತ್ ನವರು. ಈಗ ಕೆ ಎಂ ಎಫ್ ನುಂಗಲು ಹೊರಟಿರುವ ಅಮುಲ್ ಗುಜರಾತ್ ನದ್ದು, ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ? ಮೋದಿಯವರೇ? ಎಂದು ಕೇಳಿದ್ದಾರೆ.
ಗುಜರಾತ್ ರಾಜ್ಯದ ಅಮುಲ್ ಪ್ರವೇಶದಿಂದ ನಂದಿನಿಯ ಬೇಡಿಕೆ ಇನ್ನಷ್ಟು ಕುಸಿದು ಕೆ ಎಂ ಎಫ್ ಹಾಲಿನ ಸಂಗ್ರಹ ಕಡಿಮೆಯಾಗಲಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರ ಪ್ರಮುಖ ಆದಾಯದ ಮೂಲವಾದ ಹೈನಿಗಾರಿಕೆಗೆ ಯಾಕೆ ಕಲ್ಲು ಹಾಕುತ್ತಿದ್ದೀರಾ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ