ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ.11 ರವರೆಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಏ.20 ಕಡೆಯ ದಿನವಾಗಿರುತ್ತದೆ.
ಸಾರ್ವಜನಿಕರು ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್(ಎನ್.ವಿ.ಎಸ್.ಪಿ) ಲಾಗಿನ್ ಆಗುವ ಮೂಲಕ ತಮ್ಮ ಹೆಸರು ನೋಂದಾಯಿಸಲು ಅಥವಾ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬಹುದು.
ಇದಲ್ಲದೇ ಅರ್ಹ ಮತದಾರರು ವೋಟರ್ ಹೆಲ್ಪ್ ಲೈನ್ ಆ್ಯಪ್ ಮೂಲಕವೂ ನಮೂನೆ-6 ಭರ್ತಿ ಮಾಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಹೆಸರು ಖಚಿತಪಡಿಸಿಕೊಳ್ಳಲು ಸಲಹೆ:
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಈಗಲೇ ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಹೆಸರು ಇಲ್ಲದಿದ್ದರೆ ಏ.11 ರವರೆಗೆ ಹೆಸರು ಸೇರ್ಪಡೆಗೆ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಈ ಅವಕಾಶವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ