ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣಾಧಿಕಾರಿಗಳಿಂದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಕಾರು ಸೀಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮಾರೇನಹಳ್ಳಿ ಚಕ್ ಪೋಸ್ಟ್ ಬಳಿ ಏಪ್ರಿಲ್ 6ರಂದು ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಕಾರು ಸೀಜ್ ಮಾಡಲಾಗಿತ್ತು. ಕಾರಿನಲ್ಲಿ ಮತದಾರರಿಗೆ ಹಂಚಲು ತಂದಿದ್ದ 2 ಲಕ್ಷ ಮೌಲ್ಯದ ಸೀರೆಗಳು, ಮೊಬೈಲ್ ಫೋನ್ ಗಳು ಸೇರಿ ಹಲವು ವಸ್ತುಗಳು ಪತ್ತೆಯಾಗಿದ್ದವು. ಈ ಸಂಬಂಧ ಕಾರು ಸೀಜ್ ಮಾಡಿದ್ದ ಚುನಾವಣಾಧಿಕಾರಿಗಳು ಕಾರು ಚಾಲಕ ರಾಮಚಂದ್ರಪ್ಪನನ್ನು ವಶಕ್ಕೆ ಪಡೆದಿದ್ದರು.
ವಿಚಾರಣೆ ವೇಳೆ ಕಾರು ಚಾಲಕ ಕಾರಿನಲ್ಲಿ ಪತ್ತೆಯಾದ ವಸ್ತುಗಳ ಬಗ್ಗೆ ಸೂಕ್ತ ದಾಖಲೆ ನೀಡಿಲ್ಲ. ಚುನಾವಣಾಧಿಕಾರಿಗಳ ದೂರಿನ ಮೇರೆಗೆ ಕಾರು ಚಾಲಕ ರಾಮಚಂದ್ರಪ್ಪ ವಿರುದ್ಧ ತಿಲಕ ನಗರ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ