Latest

*ಗುಡುಗು ಮಿಂಚು ಸಹಿತ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇನ್ನು ಉತ್ತರ ಒಳನಾಡಿನಲ್ಲಿ ಮೂರು ದಿನ ಒಣ ಹವೆ ಮುಂದುವರೆಯಲಿದೆ. ಬಳಿಕ ಏಪ್ರಿಲ್ 15ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

https://pragati.taskdun.com/vidhanasabha-electionbjp-candidate-listcm-basavaraj-bommaireaction-2/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button