ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಧಾನಸಭಾ ಚುನವಣೆಗೆ ಒಂದು ತಿಂಗಳೂ ಸಮಯಾವಕಾಶವಿಲ್ಲ. ಆದರೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾತ್ರ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಸರಣಿ ಸಭೆ ನಡೆಸಿದರೂ ಕೆಲ ಕ್ಷೇತ್ರಗಳ ಸಮಸ್ಯೆ ಬಗೆಹರಿದಿಲ್ಲ ಎನ್ನಲಾಗಿದೆ.
ಈ ನಡುವೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಿರೀಕ್ಷಿಸಬಹುದು ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಪಟ್ಟಿ ಬಿಡುಗಡೆಯಾಗಲಿದೆ ಎದು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅರುಣಾಚಲ ಪ್ರದೇಶ ಪ್ರವಾಸದಲ್ಲಿರುವುದರಿಂದ ಪಟ್ಟಿ ಬಿಡುಗಡೆ ವಿಳಂಬವಾಗಿದೆ ಎನ್ನಲಾಗುತ್ತಿದೆ. ಇಂದು ಸಂಜೆ 4 ಗಂಟೆಗೆ ಅಮಿತ್ ಶಾ ದೆಹಲಿಗೆ ಆಗಮಿಸುತ್ತಿದ್ದಾರೆ. ಬಳಿಕ ರಾಜ್ಯ ನಾಯಕರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದು, ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ