ಪ್ರಗತಿವಾಹಿನಿ ಸುದ್ದಿ; ವಿಜಯನಗರ: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲ ದಿನಗಳು ಮಾತ್ರ ಬಾಕಿಯಿವೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಗೂ ಮುನ್ನವೇ ಹೊಸ ಬೆಳವಣಿಗೆಗಳು ಆರಂಭವಾಗಿದ್ದು, ಬಿಜೆಪಿಯ ಹಿರಿಯ ಸಚಿವರು ತಮ್ಮ ಮಕ್ಕಳಿಗಾಗಿ ಕ್ಷೇತ್ರ ತ್ಯಾಗಕ್ಕೆ ಸಜ್ಜಾಗುತ್ತಿದ್ದಾರೆ.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆಯುತ್ತಿವೆ. ಪುತ್ರನಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿರುವ ವಸತಿ ಸಚಿವ ವಿ.ಸೋಮಣ್ಣ ಅವರಿಗೂ ಪರೋಕ್ಷವಾಗಿ ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್, ಆಯ್ಕೆ ನಿಮ್ಮದು ಎಂಬ ಸಂದೇಶವನ್ನು ವರಿಷ್ಠರು ರವಾನಿಸಿದ್ದಾರೆ ಎನ್ನಲಾಗಿದೆ.
ಈ ನಡುವೆ ಬಿಜೆಪಿಯ ಕೆಲ ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪುವ ಭೀತಿಯೂ ಎದುರಾಗಿದೆ. ಇದೇ ವೇಳೆ ಸಚಿವ ಆನಂದ್ ಸಿಂಗ್ ಕ್ಷೇತ್ರ ತ್ಯಾಗಕ್ಕೆ ಸಿದ್ಧರಾಗಿದ್ದು, ಪುತ್ರನಿಗೆ ಪಟ್ಟಕಟ್ಟಲು ಮುಂದಾಗಿದ್ದಾರೆ.
ತಮ್ಮ ಪುತ್ರ ಸಿದ್ಧಾರ್ಥ್ ಗೆ ವಿಜಯನಗರದಿಂದ ಟಿಕೆಟ್ ನೀಡುವಂತೆ ಆನಂದ್ ಸಿಂಗ್ ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ಹೈಕಮಾಂಡ್ ಗೂ ಮನವಿ ಸಲ್ಲಿಸಿದ್ದು, ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ್ ನಿಂದ ಚುನಾವಣಾ ಪ್ರಚಾರ ಕೂಡ ಆರಂಭವಾಗಿದೆ ಎಂದು ತಿಳಿದುಬಂದಿದೆ.
https://pragati.taskdun.com/k-s-eshwarappapressmeetshivamogga/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ