ಪ್ರಗತಿವಾಹಿನಿ ಸುದ್ದಿ, ನವದೆಹಲಿ : ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಹಲವು ಅಚ್ಛರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚಟ್ ಸಿಕ್ಕಿದೆ.
ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಬದಲಿಗೆ ಚಿಕ್ಕರೇವಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಸವದತ್ತಿಯಲ್ಲಿ ದಿ.ಆನಂದ ಮಾಮನಿ ಪತ್ನಿ ರತ್ನಾ ಮಾಮನಿ, ಹುಕ್ಕೇರಿಯಲ್ಲಿ ಉಮೇಶಕತ್ತಿ ಪುತ್ರ ನಿಖಿಲ್ ಕತ್ತಿ ಹಾಗೂ ಚಿಕ್ಕೋಡಿಯಲ್ಲಿ ರಮೇಶ ಕತ್ತಿಗೆ ಟಿಕೆಟ್ ನೀಡಲಾಗಿದೆ.
ಯಮಕನಮರಡಿಯಲ್ಲಿ ಬಹುನಿರೀಕ್ಷಿತ ಮಾರುತಿ ಅಷ್ಟಗಿ ಬದಲಿಗೆ ಬಸವರಾಜ ಹುಂದ್ರಿಗೆ ಟಿಕೆಟ್ ನೀಡಲಾಗಿದೆ. ಖಾನಾಪುರದಲ್ಲಿ ವಿಠ್ಠಲ ಹಲಗೇಕರ್ ಅವರಿಗೆ ಟಿಕೆಟ್ ಸಿಕ್ಕಿದೆ.
ಉಳಿದೆಲ್ಲ ಕ್ಷೇತ್ರಗಳಿಗೆ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ.
BJP ಅಭ್ಯರ್ಥಿಗಳ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ