ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಇದೇ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧವೂ ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ ಸವದಿ, ಅಥಣಿಯಿಂದ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಆದರೆ ಟಿಕೆಟ್ ಕೈತಪ್ಪಿದೆ. ಟಿಕೆಟ್ ಕೊಡುವ ಭರವಸೆ ಕೊಟ್ಟಿದ್ದ ಸಿಎಂ ಬೊಮ್ಮಾಯಿ ಮಾತು ತಪ್ಪಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರನ್ನು ಬಿಜೆಪಿಗೆ ಕರೆತಂದಿದ್ದೇ ನಾನು ಹಾಗೂ ಸಿಸಿ ಪಾಟೀಲ್ ಎಂದು ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಅವರು ಕಾಂಗ್ರೆಸ್ ಗೆ ಹೋಗ್ತಿದ್ರು ಆಗ ನಾನು ಹಾಗೂ ಸಿಸಿ ಪಾಟೀಲ್ ಅವರೇ ಅವರನ್ನು ಬಿಜೆಪಿಗೆ ಸೇರಿಸಿದ್ದು ಎಂದು ತಿಳಿಸಿದ್ದಾರೆ.
ಮುಂದೆ ಸಿಎಂ ಬೊಮ್ಮಾಯಿ ಅವರು ಪ್ರಧಾನಿಯಾಗಬಹುದು. ಪ್ರಧಾನಿ ಮೋದಿಯವರ ಅವಧಿ ಮುಗಿದ ಬಳಿಕ ಸಿಎಂ ಬೊಮ್ಮಾಯಿ ಅವರಿಗೆ ಪ್ರಧಾನಿಯಾಗುವ ಅವಕಾಶವಿದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
https://pragati.taskdun.com/v-somannareactionbjp-ticketvidhanasabha-election/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ