Latest

*ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆರ್.ಶಂಕರ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮೊದಲ ಅಭ್ಯರ್ಥಿ ಪಟ್ಟಿ ಬಿಡಿಗಡೆ ಬೆನ್ನಲ್ಲೇ ಟಿಕೆಟ್ ವಂಚಿತರು ಬಿಜೆಪಿ ವಿರುದ್ಧ ಬಂಡಾಯವೆದಿದ್ದು, ರಾಜೀನಾಮೆಗೆ ಮುಂದಾಗುತ್ತಿದ್ದಾರೆ. ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ರಾಜೀನಾಮೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರನ್ನು ಭೇಟಿಯಾರ ಆರ್. ಶಂಕರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.

Home add -Advt

ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಶಂಕರ್ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರಿಂದ ಬೇಸರಗೊಂಡಿರುವ ಆರ್.ಶಂಕರ್ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

https://pragati.taskdun.com/belgaum12-election-expenditure-observers-appointment18-constituencies/

Related Articles

Back to top button