ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವಂತೆ ನಾನು ವರಿಷ್ಠರಿಗೆ ಹೇಳಿದ್ದೇನೆ. ಹಾಗಾಗಿ ಶೆಟ್ಟರ್ ಗೆ ಟಿಕೆಟ್ ಸಿಕ್ಕೇ ಸಿಗುತ್ತೇ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ 2-3 ಕಡೆ ಗೊಂದಲವಿದೆ ಅಷ್ಟೇ. ಇನ್ನುಳಿದ ಕಡೆ ಉತ್ತಮ ಅಭ್ಯರ್ಥಿಯನ್ನೇ ಆಯ್ಕೆ ಮಾಡಲಾಗಿದೆ ಎಂದರು.
ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಸಿಕ್ಕೇ ಸಿಗುತ್ತೆ. ಈ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ಸವದಿ ಅವರಿಗೆ ಬಿಜೆಪಿ ಎಲ್ಲಾ ಸ್ಥಾನಮಾನ ಕೊಟ್ಟಿದೆ. ಆದರೂ ಅವರು ಈ ತೀರ್ಮಾನ ಮಾಡಿದ್ದಾರೆ. ಅಸಮಾಧಾನಗೊಂಡ ಎಲ್ಲರ ಮನವೊಲಿಕೆ ಯತ್ನ ಮಾಡಲಾಗುವುದು ಎಂದರು.
ಇನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನನ್ನಂತೆಯೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಶಿವಮೊಗ್ಗ ನಗರ ಟಿಕೆಟ್ ಬಗ್ಗೆ ವರಿಷ್ಠರು ನಿರ್ಧಾರ ಮಾಡ್ತಾರೆ ಎಂದು ಹೇಳಿದರು.
ಈ ಬಾರಿ ಬಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ