ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮಗಳ ತಡೆಗೆ ವಿಚಕ್ಷಣೆ ದಿನದಿಂದ ದಿನಕ್ಕೆ ಬಿಗಿಯಾಗುತ್ತಿದ್ದರೂ ಅಕ್ರಮ ಹಣ, ಹೆಂಡದ ಸಾಗಾಟದ ಭಂಡ ಧೈರ್ಯದ ಪ್ರಕರಣಗಳು ಮುಂದುವರಿದಿವೆ.
ಜಿಲ್ಲೆಯಲ್ಲಿ ಬುಧವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 9 ಲಕ್ಷ ರೂ. ಅಕ್ರಮ ನಗದು ಜಪ್ತಿ ಮಾಡಲಾಗಿದೆ.
ಯಮಕನಮರಡಿಯ ಚಿಕ್ಕಾಲಗುಡ್ಡ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 1 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಕುಡಚಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ರಹಿತ 8 ಲಕ್ಷ ರೂ. ನಗದನ್ನು ಚುನಾವಣಾ ಕರ್ತವ್ಯದಲ್ಲಿರುವ ತಂಡ ವಶಪಡಿಸಿಕೊಂಡಿದೆ. ಎರಡೂ ಪ್ರಕರಣಗಳನ್ನು ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿದ್ದು ತನಿಖೆ ಮುಂದುವರಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ