Kannada NewsKarnataka News

ಮಾಜಿ ಸಿಎಂ ಸಿದ್ದರಾಮಯ್ಯ ಶುಕ್ರವಾರ ಬೆಳಗಾವಿಗೆ


ಬೆಳಗಾವಿಯ ಭೂತರಾಮನಹಟ್ಟಿಯಲ್ಲಿ ಕಾಂಗ್ರೆಸ್‌ ‘ಪ್ರಜಾಧ್ವನಿ’ ಸಮಾವೇಶ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿಯ ಭೂತರಾಮನಹಟ್ಟಿಯ ಮೈದಾನದಲ್ಲಿ  ಏ. 14ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯುವ ಕಾಂಗ್ರೆಸ್‌ ‘ಪ್ರಜಾಧ್ವನಿ’ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ವಿವಿಧ ಕಾಂಗ್ರೆಸ್‌ ಮುಖಂಡರು ಭಾಗವಹಿಸಲಿದ್ದಾರೆ.

ಸಿದ್ದರಾಮಯ್ಯ ಅವರು ಸಂಜೆ 5.45ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದ ಮೂಲಕ ಬೆಳಗಾವಿಗೆ ಆಗಮಿಸಿ ನಂತರ 6.30ಕ್ಕೆ ಭೂತರಾಮನಹಟ್ಟಿಗೆ ಬರಲಿದ್ದಾರೆ. ಅಲ್ಲಿ ನಡೆಯುವ ಕಾಂಗ್ರೆಸ್‌ ‘ಪ್ರಜಾಧ್ವನಿ’ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾಂಗ್ರೆಸ್‌ ‘ಪ್ರಜಾಧ್ವನಿ’ ಸಮಾವೇಶದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ಶಾಸಕರಾದ ಗಣೇಶ ಹುಕ್ಕೇರಿ, ಲಕ್ಷ್ಮೀ ಹೆಬ್ಬಾಳಕರ, ಅಂಜಲಿ ನಿಂಬಾಳ್ಕರ, ಮಹಾಂತೇಶ ಕೌಜಲಗಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ‌, ಬೆಳಗಾವಿ ಜಿಲ್ಲೆ ಕಾಂಗ್ರೆಸ್‌ ಅಭ್ಯರ್ಥಿಗಳು ಸೇರಿದಂತೆ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು  ಪಾಲ್ಗೊಳ್ಳಲಿದ್ದಾರೆ.

https://pragati.taskdun.com/ramesh-jarakiholi-2-including-17-nomination-papers/

Related Articles

Back to top button