Latest

ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವುದಕ್ಕೆ ಮುಹೂರ್ತ ಫಿಕ್ಸ ಆಗಿದೆ. ಇಂದು ಸಂಜೆ 4.30ಕ್ಕೆ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ.

ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಚರ್ಚೆಯ ಬಳಿಕ ಲಕ್ಷ್ಮಣ ಸವದಿ ಉಪಸ್ಥಿತಿಯಲ್ಲಿ ಶಿವಕುಮಾರ ಈ ಕುರಿತು ಮಾಹಿತಿ ನೀಡಿದರು. ಲಕ್ಷ್ಮಣ ಸವದಿ ಯಾವುದೇ ಷರತ್ತಿಲ್ಲದೇ ಕಾಂಗ್ರೆಸ್ ಸೇರಲು ಒಪ್ಪಿದ್ದಾರೆ. ಅವರು ಇಂದು ಸಂಜೆ 4.30ಕ್ಕೆ ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿಸಿದರು.

ಲಕ್ಷ್ಮಣ ಸವದಿ ಜತೆ ಇನ್ನು ಅನೇಕರು ಕಾಂಗ್ರೆಸ್ ಸೇರಲಿದ್ದಾರೆ; ಡಿ.ಕೆ. ಶಿವಕುಮಾರ್

ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಅವರ ನಂತರ ಇನ್ನು ಅನೇಕ ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರ ನಿವಾಸದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಲಕ್ಷ್ಮಣ ಸವದಿ ಅವರ ಜತೆ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಮಾತನಾಡಿದರು.

‘ಲಕ್ಷ್ಮಣ್ ಸವದಿ ಹಿರಿಯ ನಾಯಕರು. ಅವರು ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರುತ್ತಿದ್ದು, ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ. ಅವರು ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದು ಅವರಿಗೆ ಶಕ್ತಿ ತುಂಬುವುದು ನಮ್ಮ ಜವಾಬ್ದಾರಿ. ಇಂದು ಪಕ್ಷದ ನಾಯಕರೆಲ್ಲರೂ ಲಕ್ಷ್ಮಣ ಸವದಿ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರನ್ನು ಪಕ್ಷದ ಎಲ್ಲಾ ನಾಯಕರು ತುಂಬು ಹೃದಯದ ಸ್ವಾಗತ ಕೋರುತ್ತೇವೆ.

ಲಕ್ಷ್ಮಣ ಸವದಿ ಅವರ ಜತೆಗೆ ಇನ್ನು ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಎಲ್ಲರನ್ನೂ ನಾವು ಒಮ್ಮತದಿಂದ ಪಕ್ಷಕ್ಕೆ ಸ್ವಾಗತಿಸುತ್ತೇವೆ. ಸವದಿ ಅವರು ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಗಳನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ 4.30ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ’ ಎಂದು ಅವರು ತಿಳಿಸಿದರು.

ನಂತರ ಮಾತನಾಡಿದ ಲಕ್ಷ್ಮಣ ಸವದಿ, ನಾನು ಅಥಣಿಯಿಂದ ಸ್ಪರ್ಧಿಸುವ ಮತ್ತು ಕಾಂಗ್ರೆಸ್ ಸರಕಾರ ಬಂದ ನಂತರ ಅಥಣಿ ಕ್ಷೇತ್ರದಲ್ಲಿನ ನೀರಾವರಿ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವ ಷರತ್ತುಗಳನ್ನು ಮಾತ್ರ ಹಾಕಿದ್ದೇನೆ. ನಾನು ಕಾಂಗ್ರೆಸ್ ಸೇರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನೋವಾಗಿದ್ದರೆ ಸಾಂತ್ವನ ಹೇಳುತ್ತೇನೆ ಎಂದರು.

ಇಂದು ಸಂಜೆಯೇ ಕಾಂಗ್ರೆಸ್ ಸೇರುತ್ತೇನೆ. ನಿನ್ನೆ ಅಥಣಿ ಕ್ಷೇತ್ರದ 30 ಸಾವಿರಕ್ಕಿಂತ ಹೆಚ್ಚು ಕಾರ್ಯಕರ್ತರು ನನಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ನಿಮ್ಮ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ ಎಂದಿದ್ದರು. ಹಾಗಾಗಿ ಇಂದು ಸುದೀರ್ಘ ಚರ್ಚೆಯ ಬಳಿಕ ನಿರ್ಧಾರಕ್ಕೆ ಬಂದಿದ್ದೇನೆ ಎಂದು ತಿಳಿಸಿದರು.

https://pragati.taskdun.com/mla-anila-benake-has-no-seat-in-congress/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button