Latest

ಕೆಲವೇ ಹೊತ್ತಿನಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಭಾನುವಾರ ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೋಮವಾರ ಬೆಳಗ್ಗೆ 8.15ಕ್ಕೆ ಕಾಂಗ್ರೆಸ್ ಸೇರಲಿದ್ದಾರೆ.

ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ ನಂತರ ರಣದೀಪ್ ಸುರ್ಜೆವಾಲಾ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಭೇಟಿಯಾದರು.

ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ಪ್ರಮುಖರ ಉಪಸ್ಥಿತಿಯಲ್ಲಿ ಶೆಟ್ಟರ್ ಅಧಿಕೃತವಾಗಿ ಸೋಮವಾರ ಬೆಳಗ್ಗೆ ಕಾಂಗ್ರೆಸ್ ಸೇರಲಿದ್ದಾರೆ ಎಂದು ಗೊತ್ತಾಗಿದೆ. ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಪತ್ರಿಕಾಗೋಷ್ಠಿಯನ್ನೂ ಕರೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಸೋಮವಾರ ಬೆಳಗ್ಗೆ 7.15ಕ್ಕೆ ನಾಮಪತ್ರ ಸಲ್ಲಿಕೆಗಾಗಿ ಕನಕಪುರಕ್ಕೆ ತೆರಳಬೇಕಿತ್ತು. ಶೆಟ್ಟರ್ ಪಕ್ಷ ಸೇರ್ಪಡೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅವರು ಕಾರ್ಯಕ್ರಮ ಮುಗಿದ ನಂತರ ಹೊರಡಬಹುದೆಂದು ಹೇಳಲಾಗುತ್ತಿದೆ.

ಜಗದೀಶ ಶೆಟ್ಟರ್ ಅವರನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳಲು ಕೊನೆಯ ಕ್ಷಣದವರೆಗೂ ನಡೆಸಿದ ಕಸರತ್ತು ವಿಫಲವಾಗಿದೆ. ಅವರು ಬಿಜೆಪಿ ತೊರೆಯುತ್ತಾರೆ, ಕಾಂಗ್ರೆಸ್ ಸೇರುತ್ತಾರೆ ಎಂದು ಪಕ್ಷದ ನಾಯಕರು ಊಹಿಸಿರಲಿಲ್ಲ. ಪಕ್ಷಕ್ಕೆ ಇದೊಂದು ದೊಡ್ಡ ಶಾಕ್ ಆಗಿದೆ.

https://pragati.taskdun.com/jagdeesha-shettar-took-a-special-flight-to-join-the-congress/
https://pragati.taskdun.com/congress-chief-rahul-gandhi-aicc-general-secretary-kc-venugopal-kpcc-president-dk-shivakumar-visited-nandini-parlor-in-jp-nagar-bangalore-on-sunday-evening-and-enjoyed-ice-cream/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button