ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಕಾಂಗ್ರೆಸ್ ಶೆಟ್ಟರ್ ಅವರಿಗೆ ಬಿ ಫಾರಂ ನೀಡಿದೆ.
ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಗದೀಶ್ ಶೆಟ್ಟರ್ ಅವರಿಗೆ ಬಿ ಫಾರಂ ನೀಡಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಇನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಕೆಪಿಸಿಸಿ ಕಚೇರಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ