ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಆಯನೂರು ಮಂಜುನಾಥ್ ರಾಜೀನಾಮೆ ನೀಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಯನೂರು ಮಂಜುನಾಥ್, ಪರಿಷ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ತಿಳಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು, ವಿಧಾನಸಭೆಗೆ ಹೋಗಬೇಕು ಎಂದಿದ್ದೇನೆ. ಆದರೆ ಯಾವಪಕ್ಷದಿಂದ ಸ್ಪರ್ಧೆ ಎಂಬುದನ್ನು ನಾಳೆ ಹೆಳುತ್ತೆನೆ ಎಂದರು.
ಇದೇ ವೇಳೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿ ನದೆಸಿದ ಆಯನೂರು ಮಂಜುನಾಥ್, ಮನಸ್ಸಿಗೆ ಬಂದಂತೆ ಮಾತನಾಡುವ ಬಾಯಿಗೆ ಹೊಲಿಗೆ ಬೀಳಲಿ. ಈಗಾಗಲೇ ಕೆಲವರ ಬಾಯಿಗೆ ನಿಯಂತ್ರಣ ಬಿದ್ದಿದೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ