ಪ್ರಗತಿವಾಹಿನಿ ಸುದ್ದಿ; ಧಾರವಾಡ: ಬೆಳಗಾವಿಯಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಧಾರವಾಡ ಬಳಿ ಚೆಕ್ ಪೋಸ್ಟ್ ನಲ್ಲಿ ಜಪ್ತಿ ಮಾಡಿದ್ದಾರೆ.
ಧಾರವಾಡ ತಾಲೂಕಿನ ತೇಗೂರು ಚೆಕ್ ಪೋಸ್ಟ್ ನಲ್ಲಿ ಬಿವಿಸಿ ಲಾಜೆಸ್ಟಿಕ್ ವಾಹನ ತಡೆದು ತಪಾಸಣೆ ನಡೆಸಿದಾಗ ದಾಖಲೆ ಇಲ್ಲದ 7 ಕೆಜಿ 7 ಗ್ರಾಂ ಚಿನ್ನ ಪತ್ತೆಯಾಗಿದೆ. ಸುಮಾರು 5 ಕೋಟಿಗೂ ಹೆಚ್ಚು ಮೌಲ್ಯ ಬೆಲೆಬಾಳುವ ಚಿನ್ನ ಇದಾಗಿದ್ದು, ಪ್ರತಿಷ್ಠಿತ ಚಿನ್ನದ ಅಂಗಡಿಗೆ ಸೇರಿದ್ದು ಎನ್ನಲಾಗಿದೆ.
ಯಾವುದೇ ದಾಖಲೆ ಇಲ್ಲದ ಕಾರಣಕ್ಕೆ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದ್ದು, ಆದಾಯ ಹಾಗೂ ತೆರಿಗೆ ಇಲಾಖೆಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ