LatestUncategorized

*ಬಾಲಾಜಿ ಶುಗರ್ಸ್ ಕಾರ್ಖಾನೆ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಯರಗಲ್ ಕೆ.ಬಿ.ಗ್ರಾಮದಲ್ಲಿರುವ ಬಾಲಾಜಿ ಶುಗರ್ಸ್ ಕಾರ್ಖಾನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯ ಯರಗಲ್ ಬಿ.ಕೆ.ಗ್ರಾಮದಲ್ಲಿರುವ ಬಾಲಾಜಿ ಶುಗರ್ಸ್ ಮೇಲೆ ಬೆಳಿಗ್ಗೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕಳೆದ ತಿಂಗಳು ಇದೇ ಕಾರ್ಖಾನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮಾಜಿ ಸಚಿವ ಎಸ್.ಆರ್.ಪಾಟೀಲ್ ಭಾವಚಿತ್ರವಿರುವ ವಾಲ್ ಕ್ಲಾಕ್, ಟೀ ಶರ್ಟ್ ಸೇರಿದಂತೆ 2.50 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿದ್ದವು. ಐಟಿ ಅಧಿಕಾರಿಗಳಿಗೆ ಮಾಹಿ ತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಈಗ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬಾಲಾಜಿ ಶುಗರ್ಸ್ ಕಾರ್ಖಾನೆ ನಿರ್ದೇಶಕ ಹೆಚ್ ಎಲ್ ಪಾಟೀಲ್ ಮನೆ ಮೇಲೂ ದಾಳಿ ನಡೆಸಿದ್ದಾರೆ.

https://pragati.taskdun.com/karnatakaheavy-rain2-days-2/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button