LatestUncategorized

*ಚುನಾವಣಾ ಅಖಾಡದಲ್ಲಿ ಅಚ್ಚರಿ ಬೆಳವಣಿಗೆ; ಕನಕಪುರದಿಂದ ನಾಮಪತ್ರ ಸಲ್ಲಿಸಿದ ಡಿ.ಕೆ.ಸುರೇಶ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡದಲ್ಲಿ ಅಚ್ಚರಿ ಬೆಳವಣಿಗೆ ನಡೆದಿದ್ದು, ಸಂಸದ ಡಿ.ಕೆ.ಸುರೇಶ್ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಡಿ.ಕೆ.ಸುರೇಶ್ ಪದ್ಮನಾಭನಗರದಿಂದ ನಾಮಪತ್ರ ಸಲ್ಲಿಸಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಕೊನೇ ಕ್ಷಣದಲ್ಲಿ ಡಿ.ಕೆ.ಸುರೇಶ್ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದು, ಅಚ್ಚರಿ ಮೂಡಿಸಿದೆ.

ಇದು ತಂತ್ರಗಾರಿಕೆಯೋ ಅಥವಾ ಮುಂಜಾಗ್ರತೆಯೋ ಎನ್ನುವುದು ಇನ್ನೂ ಬಹಿರಂಗವಾಗಿಲ್ಲ. ಏನೇ ಆದರೂ ಇದೊಂದು ಭಾರೀ ಕುತೂಹಲಕರ ಬೆಳವಣಿಗೆಯಾಗಿದೆ.

ಲಡಿ.ಕೆ.ಶಿವಕುಮಾರ ವಿರುದ್ಧ ಕುತಂತ್ರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾನು ನಾಮ ಪತ್ರ ಸಲ್ಲಿಸಿದ್ದೇನೆ. ನಾನು ಬಿ ಫಾರ್ಮ್ ಜೊತೆಗೇ ನಾಮಪತ್ರ ಸಲ್ಲಿಸಿದ್ದೇನೆ ಎಂದು ಸುರೇಶ ತಿಳಿಸಿದ್ದಾರೆ.

https://pragati.taskdun.com/mulabagilucongress-candidatechange/
https://pragati.taskdun.com/d-k-sureshnominationvidhanasabha-election/

Related Articles

Back to top button