LatestUncategorized

*ಚುನಾವಣೆ ಹೊತ್ತಲ್ಲೇ ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ನಿಂದ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ತಮ್ಮ ವಿರುದ್ಧ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಸಿಬಿಐ ತನಿಖೆ ರದ್ದು ಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಚುನಾವಣೆ ಸಂದರ್ಭದಲ್ಲೇ ಡಿ.ಕೆ.ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ.

https://pragati.taskdun.com/d-k-sureshnomination-filekanakapuravidhanasabha-election/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button