LatestUncategorized

*ಡಿ.ಕೆ.ಶಿವಕುಮಾರ್ ನಾಮಪತ್ರ ಅಂಗೀಕಾರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ಅಂಗಿಕಾರವಾಗಿದೆ.

ವಿಧಾನಸಭಾ ಚುನಾವಣೆಗೆರಾಮನಗರ ಜಿಲ್ಲೆ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕನಕಪುರ ಕ್ಷೇತ್ರದಿಂದ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗುವ ಆತಂಕ ಎದುರಾಗಿತ್ತು. ಆದರೆ ಡಿ.ಕೆ.ಶಿವಕುಮಾರ್ ನಾಮಪತ್ರ ಅಂಗೀಕಾರವಾಗಿದೆ ಎಂದು ತಿಳಿದುಬಂದಿದೆ.

Home add -Advt

ಡಿ.ಕೆ.ಶಿವಕುಮಾರ್ ನಾಮಪತ್ರ ತಿರಸ್ಕೃತವಾಗುವ ಭೀತಿ ಹಿನ್ನೆಲೆಯಲ್ಲಿ ವರಿಷ್ಠರ ಸೂಚನೆ ಮೇರೆಗೆ ಮುಂಜಾಗೃತಾ ಕ್ರಮವಾಗಿ ಸಂಸದ ಡಿ.ಕೆ.ಸುರೇಶ್ ಕೂಡ ನಾಮಪತ್ರ ಸಲ್ಲಿಸಿದ್ದರು. ಈಗ ಡಿ.ಕೆ.ಶಿವಕುಮಾರ್ ನಾಮಪತ್ರ ಅಂಗೀಕಾರವಾಗಿರುವ ಹಿನ್ನೆಲೆಯಲ್ಲಿ ಇಬ್ಬರಲ್ಲಿ ಯಾರು ನಾಮಪತ್ರ ಹಿಂಪಡೆಯಲಿದ್ದಾರೆ? ಚುನವಣಾ ಸ್ಪರ್ಧೆಯ ಕಣದಲ್ಲಿ ಯಾರು ಮುಂದುವರೆಯಲಿದ್ದಾರೆ ಎಂಬ ಕುತೂಹಲ ಇಮ್ಮಡಿಗೊಂಡಿದೆ.

https://pragati.taskdun.com/d-k-shivakumarpressmeetbjpvidhanasabha-election/

Related Articles

Back to top button