Latest

*ಚುನಾವಣೆ ಹೊತ್ತಲ್ಲಿ ವಿನಯ್ ಕುಲಕರ್ಣಿಗೆ ಸಂಕಷ್ಟ; ಅರ್ಜಿ ವಜಾಗೊಳಿಸಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ವಿಧಾನಸಭಾ ಚುನಾವಣೆಯಲ್ಲಿ ಧಾರವಾಡದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಅನುಮತಿ ಕೊಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದರಿಂದ ಹೈಕೊರ್ಟ್ ಕೂಡ ಧಾರವಾಡ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ತಿಳಿಸಿದೆ.

Home add -Advt

ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿರುವ ಹೈಕೊರ್ಟ್, ಧಾರವಾಡ ಪ್ರವೇಶಕ್ಕೆ ನಿರ್ಬಂಧವಿದ್ದಾಗ್ಯೂ ಕಾಂಗ್ರೆಸ್ ಹೈಕಮಾಂಡ್ ಅದೇ ಕ್ಷೇತ್ರದಿಂದ ಟಿಕೆಟ್ ನೀಡಿದ್ದು ಯಾಕೆ ಎಂದು ವಿನಯ್ ಪರ ವಕೀಲರನ್ನು ಪ್ರಶ್ನಿಸಿದೆ.

https://pragati.taskdun.com/pratap-simhasiddaramaiahv-somannavarunamysore/

Related Articles

Back to top button