*ಖುದ್ದು ಸಿಎಂ ಕಚೇರಿ ಸೂಚನೆಯಿಂದಲೇ ಇದೆಲ್ಲವೂ ನಡೆಯುತ್ತಿದೆ; ಇದಕ್ಕೆ ಮುಖ್ಯಮಂತ್ರಿಗಳೇ ನೇರ ಹೊಣೆ; ಡಿ.ಕೆ.ಶಿವಕುಮಾರ್ ಗಂಭೀರ ಆರೋಪ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿಯಿಂದ ಭಾರಿ ಷಡ್ಯಂತ್ರಗಳು ನಡೆದಿವೆ. ನಮ್ಮ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಬಿಜೆಪಿ ಸಿಎಂ ಕಚೇರಿಯಿಂದಲೇ ತಂತ್ರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದಲೇ ಯತ್ನಗಳು ನಡೆದಿವೆ. ಸಿಎಂ ಕಚೇರಿ, ಸಿಎಂ ಲೀಗಲ್ ಟೀಂ ನಿಂದ ಅಧಿಕಾರ ದುರ್ಬಳಕೆ ಮಾಡಿಕೊಲ್ಳಲಾಗುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಅಫಿಡವಿಟ್ ಡೌನ್ ಲೋಡ್ ಮಾಡಿಕೊಳ್ಳಲಾಗುತ್ತಿದೆ. ಖುದ್ದು ಸಿಎಂ ಕಚೇರಿ ಸೂಚನೆ ಮೇರೆಗೆ ಇದೆಲ್ಲವೂ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಇದಕ್ಕೆ ಸಿಎಂ ಬೊಮ್ಮಾಯಿ ಅವರೇ ನೇರ ಹೊಣೆಗಾರರಾಗಿರುತ್ತಾರೆ. ಮುಖ್ಯಮಂತ್ರಿಗಳ ಕಚೇರಿಯ ಕಾಲ್ ಡೀಟೇಲ್ಸ್ ತೆಗೆಯಬೇಕು. ಈ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ