*ಜಗದೀಶ್ ಶೆಟ್ಟರ್ ಪಕ್ಷೇತರರಾಗಿ ನಿಲ್ಲಬಹುದಿತ್ತು, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ನಿಜಕ್ಕೂ ದುರಂತ; ಬಿ.ವೈ.ವಿಜಯೇಂದ್ರ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಬಿಜೆಪಿ ಹೊಸ ಮುಖಗಳಿಗೆ ಅವಕಾಶ ನೀಡಿದೆ. ರಿಸ್ಕ್ ತೆಗೆದುಕೊಳ್ಲುವುದರಲ್ಲಿ ಹೈಕಮಾಂಡ್ ನಿಸ್ಸೀಮರು. ಪಕ್ಷದ ಹಿತದೃಷ್ಟಿಯಿಂದ ರಿಸ್ಕ್ ತೆಗೆದುಕೊಳ್ಳುತ್ತಾರೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ದೇಶದಲ್ಲಿ ಕಾಂಗ್ರೆಸ್ ದಿವಾಳಿಯಾಗಿದೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದು ಕಾಂಗ್ರೆಸ್ ಹೈಕಮಾಂಡ್ ಗೆ ಎಟಿಎಂ ಆಗಲು ಪಿತೂರಿ ನಡೆಸಿದೆ. ಕಾಂಗ್ರೆಸ್ ಪಿತೂರಿಗೆ ರಾಜ್ಯದ ಪ್ರಜ್ಞಾವಂತ ಮತದಾರ ಬಗ್ಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯ ಲಿಂಗಾಯಿತ ಆಣೆಕಟ್ಟೆ ಒಡೆದಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ದಿ.ಕೆ.ಶಿವಕುಮಾರ್, ಕಾಂಗ್ರೆಸ್ ಸಮಾಜ ಸಮಾಜಗಳನ್ನು ಒಡೆದು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ನಾಯಕರಿಗೆ ವೀರಶೈವ ಲಿಂಗಾಯಿತ ಸೇರಿದಂತೆ ಯಾವುದೇ ಸಮಾಜದ ಬಗ್ಗೆ ಕಾಳಜಿಯಿಲ್ಲ. ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ವೀರಶೈವ ಲಿಂಗಾಯಿತ ಸಮಾಜದ ಬಗ್ಗೆ ಮಾತನಾಡುವ ನೈತಿಕತೆಯೂ ಅವರಿಗಿಲ್ಲ ಎಂದು ಕಿಡಿಕಾರಿದರು.
ಇದೇ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ವಿಚಾರವಾಗಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಹಿರಿಯರು ಅವರ ಬಗ್ಗೆ ಕೀಳಾಗಿ ನಾನು ಮಾತನಾಡಲ್ಲ. ಆದರೆ ಅವರು ಬಿಜೆಪಿ ಬಿಟ್ಟು ಹೋಗಿದ್ದು ನೋವು ತಂದಿದೆ. ಅದರಲ್ಲೂ ಅವರು ಕಾಂಗ್ರೆಸ್ ಪಕ್ಷ ಸೇರಿರುವುದು ದುರಂತ. ಕಾಂಗ್ರೆಸ್ ಸೇರುವ ಬದಲು ಪಕ್ಷೇತರರಾಗಬಹುದಿತ್ತು. ವೀರಶೈವ ಲಿಂಗಾಯಿತ ಎಂದು ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರಿದ್ದು ತುಂಬಾ ಬೇಸರವಾಗಿದೆ. ಬೇರೆ ಬೇರೆ ಜಾತಿ ಒಡೆಯಲು ಯತ್ನಿಸಿದ್ದು ಕಾಂಗ್ರೆಸ್ ಪಕ್ಷ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ನಿಜಕ್ಕೂ ದುರಂತ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ