ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 17 ದಿನಗಳು ಬಾಕಿಯಿದ್ದು, ಚುನಾವಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿಯಾಗಿದ್ದ ಗಿರೀಶ್ ಹಾಗೂ ದಾವಣಗೆರೆ ಎಸ್.ಪಿ.ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರಿನ ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ನೇಮಕ ಮಾಡಲಾಗಿದ್ದು, ದಾವಣಗೆರೆ ಎಸ್ ಪಿಯಾಗಿ ಅರುಣ್ ಕೆ ಅವರನ್ನು ನೇಮಕ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ