Latest

ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತಂದಿದ್ದ ಮತ್ತೊಂದು ಚೀತಾ ಸಾವು

ಪ್ರಗತಿವಾಹಿನಿ ಸುದ್ದಿ, ಕುನೋ: ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ಮತ್ತೊಂದು ಚೀತಾ ಮೃತಪಟ್ಟಿದೆ.

6 ವರ್ಷದ ಗಂಡು ಚೀತಾ ‘ಉದಯ್’​ ಅನಾರೋಗ್ಯದಿಂದ ಅಸು ನೀಗಿದೆ. ಇತ್ತೀಚೆಗಷ್ಟೇ ‘ಸಾಶಾ’ ಹೆಸರಿನ ಚೀತಾ ಕಿಡ್ನಿ ಸಮಸ್ಯೆಯಿಂದ ಮೃತಪಟ್ಟಿತ್ತು.

Home add -Advt

ಭಾನುವಾರ ಬೆಳಗ್ಗೆ ಆರೋಗ್ಯ ಸಮಸ್ಯೆಗೆ ಈಡಾಗಿದ್ದ ಚೀತಾವನ್ನು ವನ್ಯಜೀವಿ ವೈದ್ಯರು ಚಿಕಿತ್ಸೆ ಮತ್ತು ಮೇಲ್ವಿಚಾರಣೆಗಾಗಿ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಮೃತಪಟ್ಟಿದೆ.

“ಚೀತಾ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪಶು ವೈದ್ಯಕೀಯ ತಂಡ ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಲಿದೆ. ಮರಣೋತ್ತರ ಪರೀಕ್ಷೆಯ ಸಂಪೂರ್ಣ ಚಿತ್ರೀಕರಣ ಮಾಡಲಾಗುತ್ತದೆ” ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್. ಚೌಹಾಣ್ ಮಾಹಿತಿ ನೀಡಿದ್ದಾರೆ.

https://pragati.taskdun.com/union-cabinet-in-karnataka-on-25th-26th/
https://pragati.taskdun.com/conspiracy-to-finish-lingayat-leaders-within-bjp-siddaramaiah/
https://pragati.taskdun.com/a-world-class-radiation-oncology-unit-at-kle-hospital-dedicated-by-dr-prabhakar-kore/

Related Articles

Back to top button