ಪ್ರಗತಿವಾಹಿನಿ ಸುದ್ದಿ; ಮೈಸೂರು: ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯಿದೆ. ಖಂಡಿತವಾಗಿಯೂ ಸಿಎಂ ಅಗಬೇಕು ಎಂದು ಕ್ಷೇತ್ರದ ಜನರೂ ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಮೈಸೂರುನಲ್ಲಿ ಮಾತನಾಡಿದ ಸಿ.ಟಿ.ರವಿ, ನಾನು ಮುಕ್ಯಮಂತ್ರಿಯಾಗಬೇಕು ಎಂಬ ಆಸೆಯಿದೆ. ಆದರೆ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾತ್ರ ಸಿ.ಟಿ.ರವಿ ಸಿಎಂ ಆಗಬೇಕು ಎಂಬ ಕೂಗು ಕೇಳಿಬರುತ್ತಿದೆ. ರಾಜ್ಯದೆಲ್ಲೆಡೆ ಈ ಕೂಗು ಕೇಳಿದಾಗ ನನ್ನನ್ನು ಸಿಎಂ ಮಾಡುವಂತೆ ಕೇಳುತ್ತೇನೆ ಎಂದು ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆರೋಪ ವಿಚಾರವಾಗಿ ಮಾತನಾಡಿದ ಅವರು, ಇದು ರಾಜಕೀಯ ವ್ಯಭಿಚಾರನಾ? ಎಂದು ಪ್ರಶ್ನಿಸಿದರು. ಇದನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಸ್ಪಷ್ಟಪಡಿಸಬೇಕು ಎಂದರು.
ಲಿಂಗಾಯಿತ ಡ್ಯಾಂ ಒಡೆದಿದೆ ಎಂಬ ಹೇಳಿಕೆ ನೀಡಿರುವ ಕಾಂಗ್ರೆಸ್ ವಿಚಾರವಾಗಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ ನವರದ್ದು ಬರಿ ಒಡೆಯುವ ಕೆಲಸ. ಇದು ಅವರ ರಾಜಕೀಯ ವೃತ್ತಿ. ಹಿಂದೆ ವೀರಶೈವ ಲಿಂಗಾಯಿತ ಹೆಸರಲ್ಲಿ ಒಡೆದರು ನಾವು ಲಿಂಗಾಯಿತರನ್ನು ಕಟ್ಟಿ ಡ್ಯಾಂ ಗಟ್ಟಿ ಮಾಡಿ ಎತ್ತರಿಸಿದ್ದೇವೆ. ಕಾಂಗ್ರೆಸ್ ಚುನಾವಣೆಯಲ್ಲಿ ಮುಳುಗಿದಾಗ ಅವರಿಗೆ ಗೊತ್ತಾಗುತ್ತದೆ ಎಂದು ಟಾಂಗ್ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ