ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇನಾಮದಾರ್, ಮಣಿಆಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಲಂಗ್ಸ್ ಹಾಗೂ ಲಿವರ್ ಸಮಸ್ಯೆಯಿಂದ ಡಿ.ಬಿ.ಇನಾಂದಾರ್ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಡಿ ಬಿ ಇನಾಮದಾರ ಪರಿಚಯ:
ಜನನ 02/07/1950
ಪ್ರಥಮ ಬಾರಿ 1983ರಲ್ಲಿ ಶಾಸಕರಾಗಿ ಆಯ್ಕೆ,
2ನೇಯ ಬಾರಿ 1985
3ನೇಯ ಬಾರಿ 1994
4ನೇಯ ಬಾರಿ 1999
5ನೇಯ ಬಾರಿ 2013
ಒಟ್ಟು ಐದು ಸಲ ಶಾಸಕರಾಗಿ ಆಯ್ಕೆಯಾಗಿರುತ್ತಾರೆ.
ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಮೊದಲನೇ ಸಲ 1983ರಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿ ಎರಡನೇ ಸಲ 1985ರಲ್ಲಿ ಆರೋಗ್ಯ ಸಚಿವರಾಗಿ ಮೂರನೇ ಸಲ 1987ರಲ್ಲಿ ಅಬಕಾರಿ ಸಚಿವರಾಗಿ ಸಂಪುಟ ದರ್ಜೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ತದನಂತರದಲ್ಲಿ 1999 ರಲ್ಲಿ ಎಸ್ಎಂ ಕೃಷ್ಣ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು. 2000ರಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ. ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಅವರ ಮೃತದೇಹ ಬೆಂಗಳೂರಿನಿಂದ ಆಗಮಿಸುತ್ತಿದ್ದು, ಬುಧವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ