Latest

ಶುರುವಾಯ್ತು ಎಸ್ಎಸ್ಎಲ್ ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಇತ್ತೀಚೆಗೆ ನಡೆದ 2023-24ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಇದೀಗ ಆರಂಭಗೊಂಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯವನ್ನೂ ನಿಭಾಯಿಸಬೇಕಾದ ಕಾರಣ ಕ್ಷಿಪ್ರ ಗತಿಯಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಸಿ ಫಲಿತಾಂಶ ನೀಡಲು ಪರೀಕ್ಷಾ ಮಂಡಳಿ ನಿರ್ಧರಿಸಿದೆ. ಈ ಬಾರಿಯ ಪಿಯುಸಿ ಫಲಿತಾಂಶವನ್ನು ಪರೀಕ್ಷೆ ನಡೆದ ಕೇವಲ 23 ದಿನಗಳಲ್ಲಿ ನೀಡಲಾಗಿತ್ತು. ಅದೇ ಮಾದರಿಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ನೀಡಲು ಉದ್ದೇಶಿಸಲಾಗಿದೆ.

ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಒಟ್ಟು 8.60 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ ರಾಜ್ಯದ 36 ಕೇಂದ್ರಗಳಲ್ಲಿ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದೀಗ ಸುಮಾರು 70 ಸಾವಿರಕ್ಕೂ ಅಧಿಕ ಶಿಕ್ಷಕರು 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಲು ಆರಂಭಿಸಿದ್ದಾರೆ.

ಕ್ಷಿಪ್ರ ಗತಿಯಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಸಿ ಇಲಾಖೆಯ ಅಧಿಕೃತ ವೆಬ್ ಸೈಟ್ karresults.nic.in ಮತ್ತು kseab.karnataka.gov.in ನಲ್ಲಿ ಪ್ರಕಟಿಸಲು ನಿರ್ಧರಿಸಲಾಗಿದೆ.

https://pragati.taskdun.com/heavy-rain-and-hailstorm-forecast-in-11-states/
https://pragati.taskdun.com/d-b-inamadardeathbelagavi/

https://pragati.taskdun.com/indipendent-candidate-lakshmi-manohar-hebbalkar-has-withdrawn-her-nomination-paper/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button